ಬೆಂಗಳೂರು, ಜು.25, 2020 : (www.justkannada.in news) : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. ಅದು ಜೆಡಿಎಸ್ ಬೆಂಬಲಿತ ಕಾರ್ಯಕರ್ತರಿಂದಲೇ ಅನ್ನೋದು ವಿಶೇಷ.
ಅಷ್ಟಕ್ಕೂ ಪಾಪ ನಿಖಿಲ್ ಅಂಥ ಯಾವುದೇ ತಪ್ಪ್ ಮಾಡಿಲ್ಲ. ಆದರೆ, ಶಾಸಕ ಕಮ್ ಚಿತ್ರ ನಿರ್ಮಾಪಕ ಮುನಿರತ್ನ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಫೇಸ್ ಬುಕ್ ಪೇಜ್ ನಲ್ಲಿ ಶುಭ ಹಾರೈಸಿದ್ದನ್ನೇ ನೆಪ ಮಾಡಿಕೊಂಡು, ನಿಖಿಲ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆದರೆ ನಿಖಿಲ್ ಕುಮಾರಸ್ವಾಮಿ, ಅಭಿಮಾನಿಗಳ ಈ ಪ್ರೀತಿಯ ಆಕ್ಷೇಪಕ್ಕೆ ತುಂಬ ಸಂಯಮದಿಂದಲೇ, ಜಾಣತನದ ಉತ್ತರ ನೀಡಿದ್ದಾರೆ. ಅದು ಹೀಗಿದೆ…..
ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. ‘ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು‘ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ. ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ.
ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ.
ಮುನಿರತ್ನ ರಾಜಕೀಯವಾಗಿ ಕುಮಾರಸ್ವಾಮಿ ಅವರಿಗೆ ಏನೇ ಮಾಡಿರಬಹುದು. ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ. ಅದರಲ್ಲಿ ಎರಡು ಮಾತಿಲ್ಲ.ಕಾರ್ಯಕರ್ತನಾಗಿ, ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ.
ooo
key words : nikhil.kumaraswamy-actor-politician-jds-munirathna-birthday-wish-controversy