ನವದೆಹಲಿ, ಫೆಬ್ರವರಿ,1,2025 (www.justkannada.in): ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು ರೈತರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುಡ್ ನ್ಯೂಸ್ ನೀಡಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ ಮಾಡುತ್ತಿದ್ದೇವೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ .
ಹಾಗೆಯೇ ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದು, ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದಿದ್ದಾರೆ.
Key words: Union Budget, Farmer, Kisan Credit Loan, Limit, Increased