ನವದೆಹಲಿ,ಮಾ,2,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆಗೆ ತಡೆಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದೆ.
ಅಪರಾಧಿಗಳಾದ ಅಕ್ಷಯ್ ಠಾಕೂರ್(31), ಪವನ್ ಗುಪ್ತಾ(25) ಹಾಗೂ ಮುಕೇಶ್ ಸಿಂಗ್(32) ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದ್ದು ಈ ಮೂಲಕ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಇನ್ನು ನಾಳೆ ಬೆಳಿಗ್ಗೆ ನಾಲ್ವರು ಅಪರಾಧಿಗಳಿಗೆ ಗಲ್ಲಿಗೇರಿಸುವ ಸಾಧ್ಯತೆ ಇದೆ.
ಈ ನಡುವೆ ಇಂದು ಆರೋಪಿ ಪವನ್ ಗುಪ್ತ ಸಲ್ಲಿಸಿದ್ದ ಕ್ಷಮಾಧಾನ ಕೋರಿದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಕೊನೆಯ ಪ್ರಯತ್ನವಾಗಿ ಅಪರಾಧಿ ಪವನ್ ಗುಪ್ತ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಿದ್ದು, ಇದು ಕೂಡ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Key words: Nirbhaya- gang rape -murder –case- Petition – dismissed