ಬೆಳಗಾವಿ,ನವೆಂಬರ್,12,2020(www.justkannada.in): ಉಪಚುನಾವಣೆ ಗೆಲುವು ಸಾಧಿಸಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯನ್ನ ಸಿಎಂ ಬಿಎಸ್ ಯಡಿಯೂರಪ್ಪ ಮುಖ ಮಾಡಿದ್ದು ಶೀಘ್ರದಲ್ಲೇ ತಮ್ಮ ಸಂಪುಟಕ್ಕೆ ಹೊಸಬರನ್ನ ಸೇರ್ಪಡೆಗೊಳಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಈ ನಡುವೆ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಹಲವು ಶಾಸಕರು ಲಾಬಿ ನಡೆಸುತ್ತಿದ್ದು ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿ ಒತ್ತಡ ಹಾಕುತ್ತಿದ್ದಾರೆ. ನಿನ್ನೆಯಷ್ಟೇ ಹಲವು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿ ಸಭೆ ನಡೆಸಿದ್ದರು.
ಈ ಮಧ್ಯೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಂಪುಟ ವಿಸ್ತರಣೆ ವೇಳೆ ಯಾರಪರವೂ ವಕಾಲತ್ತು ವಹಿಸಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಮೇಲಿನ ಗೌರವಕ್ಕೆ ಶಾಸಕರು ಬರುತ್ತಾರೆ. ನಾನು ಮಂತ್ರಿ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ. ನನಗೆ ದೊಡ್ಡ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಎಲ್ಲದರಲ್ಲೂ ತಲೆ ಹಾಕಬಾರದು. ಇತಿಮಿತಿಯಲ್ಲಿ ಇರಬೇಕು.ಸಿಎಂ ಬಿಎಸ್ ವೈ ನಿರ್ಧಾರಕ್ಕೆ ಬದ್ದ ಎಂದಿದ್ದಾರೆ.
Key words: No advocates – expansion – cabinet – Minister- Ramesh Jarakiholi