ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ: ನಮ್ಮ ಪಕ್ಷ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

ಮೈಸೂರು,ಆಗಸ್ಟ್,31,2021(www.justkannada.in):  ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್  ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ  ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅರುಣ್ ಸಿಂಗ್, ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನ ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದರು.

ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ

ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಬಸವರಾಜ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ. ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ‌ ಬಗ್ಗೆ ಯಾವುದೇ ಒತ್ತಡ ಇಲ್ಲ  ಎಂದು ಅರುಣ್ ಸಿಂಗ್ ಹೇಳಿದರು.

ENGLISH SUMMARY…

No alliance with JDS: Our party is capable of winning more seats in Mysuru region – State BJP incharge Arun Singh
Mysuru, August 31, 2021 (www.justkannada.in): The Karnataka State BJP In-charge Arun Singh informed that the BJP doesn’t have any plans of entering into any official or unofficial alliance with the JDS.
Arun Singh visited the Chamundi hill and offered his prayers to the goddess Chamundeshwari today. Speaking with the media persons after visiting the temple, Arun Singh expressed his view that the people of Karnataka have already seen both the JDS and Congress administration. “We won’t make any alliance with any party. It is our wish and mandate to win with a majority. Ours is the biggest party in the world,” he said.
“B.S. Yediyurappa is a great leader of the state. He has a lot of experience in organizing the party. Our party will use his experience for this. The Basavaraj Bommai government is doing pretty well. The party is working for the overall welfare of the state. The party is gaining strength day by day in the Mysuru region and we are confident of winning more seats,” he added.
Keywords: State BJP In-charge/ Arun Singh/ visit/ Mysuru/ Chaundi hill

Key words: No alliance- with –JDS- state BJP-in charge – Arun Singh-mysore