ನವದೆಹಲಿ,ಸೆ,25,2019(www.justkannada.in) ನಾನು ಕಾಂಗ್ರೆಸ್ ಸೇರಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೂ ನನ್ನನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಉಪ ಚುನಾವಣೆಗೆ ತಡೆ ನೀಡುವಂತೆ ನನ್ನ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿ ವಾದ ಮಂಡಿಸಲಿದ್ದಾರೆ. ಹೀಗಾಗಿ ನಮ್ಮ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲ್ಲ ಎಂದು ಅನರ್ಹ ಶಾಸಕ ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
17 ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಮಧ್ಯೆ 15 ಅನರ್ಹ ಶಾಸಕರ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದೆ. ಹೀಗಾಗಿ ಅರ್ಜಿ ವಿಚಾರಣೆ ಮುಗಿಯುವವರೆಗೆ ಚುನಾವಣೆಗೆ ತಡೆ ನೀಡಬೇಕು ಇಲ್ಲ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅನರ್ಹ ಶಾಸಕರು ಮನವಿ ಸಲ್ಲಿಸಿದ್ದಾರೆ.
ಇಂದು ಅರ್ಜಿ ವಿಚಾರಣೆ ಆರಂಭಕ್ಕೂ ಮುನ್ನ ನವದೆಹಲಿಯಲ್ಲಿ ಮಾತನಾಡಿದ ಆರ್. ಶಂಕರ್, ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ನಲ್ಲಿ ವಿಲೀನ ಮಾಡಿಲ್ಲ. ಉಪ ಚುನಾವಣೆಗೆ ತಡೆ ನೀಡುವಂತೆ ನನ್ನ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿ ವಾದ ಮಂಡಿಸಲಿದ್ದಾರೆ. ಕೆಪಿಜೆಪಿಯನ್ನು ಕಾಂಗ್ರೆಸ್ ನಲ್ಲಿ ವಿಲೀನ ಮಾಡದಿದ್ದರೂ, ಕಾಂಗ್ರೆಸ್ ಸೇರ್ಪಡೆ ಪ್ರಕ್ರಿಯೆ ಸಂಪೂರ್ಣ ಮುಗಿಯದಿದ್ದರೂ ಸ್ಪೀಕರ್ ನನ್ನನ್ನ ಅನರ್ಹ ಮಾಡಿದ್ದಾರೆ. ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ. ಚುನಾವಣೆಗೆ ತಡೆ ಕೋರುತ್ತೇವೆ ಎಂದು ಹೇಳಿದರು.
Key words: no by-election – our constituency-disqualified MLA- R. Shankar -confidence