ಮೈಸೂರು, ನವೆಂಬರ್ 14, 2021 (www.justkannada.in): ಕೊಡಗಿನ ಪೊನ್ನಂಪೇಟೆ ಕೊಡವ ಸಮಾಜ ಮತ್ತು ವಿರಾಜಪೇಟೆ ಕೊಡವ ಸಮಾಜಗಳು ವಿವಾಹ ಸಮಾರಂಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಹಾರಿಸೋದನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದೆ.
ಶಾಂಪೇನ್ ಹಾಗೂ ಕೇಕ್ ಕತ್ತರಿಸುವುದನ್ನು ಮದುವೆಗಳಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ. ಈ ಕುರಿತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟಕ್ಮಾಡ ರಾಜೀವ್ ಬೋಪಯ್ಯ ಸಂಬಂಧ ವಾರ್ಷಿಕ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಮ್ಮ ಸಂಸ್ಕೃತಿಯನ್ನೇ ಉಳಿಸಿ ಬೆಳೆಸಬೇಕಾದ ನಾವು ಬೇರೆಯವರ ಸಂಸ್ಕೃತಿಯನ್ನು ಆಚರಿಸಿ ನಮ್ಮ ಸಂಸ್ಕೃತಿಗೆ ಧಕ್ಕೆ ತರಬಾರದು ಅಂತ ಮನವಿ ಮಾಡಿಕೊಂಡಿದ್ದಾರೆ.
ಕೊಡವ ಸಂಸ್ಕೃತಿಯೇ ವಿಶಿಷ್ಟವಾಗಿದ್ದು, ನಮ್ಮ ಸಂಸ್ಕೃತಿ ವಿರುದ್ದವಾಗಿ ಹಲವು ಮಂದಿ ನಡೆದುಕೊಳ್ಳುತ್ತಿದ್ದಾರೆ. ನಮ್ಮ ಸಂಸ್ಕೃತಿಯನ್ನುಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.