ಬೆಂಗಳೂರು,ಫೆ,29,2020(www.justkannada.in): ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಅದು ಫ್ರೀಡಂ ಪಾರ್ಕ್ ನಲ್ಲಿ ಅಥವಾ ಟೌನ್ ಹಾಲ್ ಮುಂದೆ ನಡೆಯುತ್ತಿತ್ತು. ಆದರೆ ಇನ್ಮುಂದೆ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸುವಂತಿಲ್ಲ.
ಹೌದು, ಇಂತಹದೊಂದು ಆದೇಶವನ್ನ ಬಿಬಿಎಂಪಿ ಮೇಯರ್ ಎಂ.ಗೌತಮ್ ಕುಮಾರ್ ಹೊರಡಿಸಿದ್ದಾರೆ. ಈ ಬಗ್ಗೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಯುವುದರಿಂದ ವಾಹನ ಸವಾರರಿಗೆ ಟ್ರಾಫಿಕ್ ಜಾಮ್ ಕಿರಿಕಿರಿ ಉಂಟಾಗಿ, ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೇ ಜನಸಾಮಾನ್ಯರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಲು ಅವಕಾಶ ನೀಡದಿರಲು ಬಿಬಿಎಂಪಿ ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ ಬಿಬಿಎಂಪಿ ಮೇಯರ್ ಎಂ ಗೌತಮ್ ಕುಮಾರ್, ಟೌನ್ ಹಾಲ್ ಮುಂದೆ ಪ್ರತಿಭಟನೆ ಮಾಡುವುದರಿಂದ ಯಾರೂ ಟೌನ್ ಹಾಲ್ ಬಾಡಿಗೆಗೆ ಪಡೆಯುತ್ತಿಲ್ಲ. ಟೌನ್ ಹಾಲ್ ಮುಂದೆ ಸಾರ್ವಜನಿಕರ ಓಡಾಟ ಹೆಚ್ಚಾಗಿದೆ. ಹಾಗೆಯೇ ಟೌಲ್ ಹಾಲ್ ಬಳಿ ಮುಖ್ಯರಸ್ತೆ ಇದೆ. ಹೀಗಾಗಿ ಟೌನ್ ಹಾಲ್ ಮುಂದೆ ಪ್ರತಿಭಟನೆಗೆ ಮುಷ್ಕರಕ್ಕೆ ಅವಕಾಶವಿಲ್ಲ. ಈ ವಿಚಾರವನ್ನ ಪೊಲೀಸರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Key words: no chance – protest- in front of – town hall-BBMP