ಬೆಂಗಳೂರು,ಫೆಬ್ರವರಿ,9,2021(www.justkannada.in): ಅರ್ಧ ವೇತನ, ಅಧಿಕಾರಿಗಳಿಂದ ನಿಲ್ಲದ ಕಿರುಕುಳ, ಸಮಸ್ಯೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಸಾಂಕೇತಿಕ ಮುಷ್ಕರ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸಾರಿಗೆ ನೌಕರರ ವೇತನ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಅವರ ವೇತನದಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ. ನಾಳೆ ಬಸ್ ಸಂಚಾರದಲ್ಲಿಯೂ ವ್ಯತ್ಯಯವಾಗುವುದಿಲ್ಲ ಎಂದು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಷ್ಟದಿಂದ ವೇತನದಲ್ಲಿ ಕೊಂಚ ಏರುಪೇರಾಗಿತ್ತು. ಈಗ ಸಾರಿಗೆ ನೌಕರರ ವೇತನವನ್ನು ನೀಡಲಾಗುವುದು. ಡಿಸೆಂಬರ್ ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದರು. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸುತ್ತೇವೆ ಎಂದರು.
ನಾಳಿನ ಪ್ರತಿಭಟನೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಬಿಎಂಟಿಸಿ ಕೇಂದ್ರ ಕಚೇರಿ ಎದುರು ನೌಕರರು ಸಾಂಕೇತಿಕವಾಗಿ ಧರಣಿ ಮಾಡುತ್ತಾರೆ ಎಂಬುದು ಗೊತ್ತಾಗಿದೆ. ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
Key words: no change –bus- tomorrow-DCM- Laxman Savadi.