ನವದೆಹಲಿ,ಮಾರ್ಚ್,17,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು ಇಂದು ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿ ಹಲವು ನಾಯಕರು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಲಿದ್ದು ಆಕಾಂಕ್ಷಿಗಳ ದಂಡು ದೆಹಲಿಯತ್ತ ತೆರಳಿದೆ.
ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒತ್ತಡ ಇಲ್ಲ. ಯಾರೆಲ್ಲಾ ಅಭ್ಯರ್ಥಿಗಳು ಶ್ರಮ ವಹಿಸಿದ್ದಾರೆ ಅನ್ನೋದು ಗೊತ್ತಿದೆ. ಕಳೆದ 3 ವರ್ಷದಿಂದ ಅಭ್ಯರ್ಥಿಗಳ ಶ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದೇವೆ. ಸಿಇಸಿ ಜತೆ ಐದಾರು ಬಾರಿ ಸಭೆ ನಡೆಸಿದ್ದೇವೆ. 10ರಿಂದ 12 ಬಾರಿ ಸರ್ವೆ ನಡೆಸಿದ್ದೇವೆ. ಈ ಎಲ್ಲರ ಬಗ್ಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯಲ್ಲಿ ಚರ್ಚೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಸಭೆಯಿದೆ ಎಂದರು.
ಗೆಲ್ಲುವ ಅವಕಾಶ ಇರುವ ಕಡೆ ಯುವಕರು ಮಹಿಳೆಯರಿಗೆ ಟಿಕೆಟ್ ನೀಡಲಾಗುತ್ತದೆ. ಬಹುತೇಕ ಶಾಸಕರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
Key words: no confusion- selection – Congress- candidates- DK Shivakumar.