ಹುಬ್ಬಳ್ಳಿ,ಏಪ್ರಿಲ್,28,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದು ಈ ಮಧ್ಯೆ ತಮ್ಮ ಪ್ರಚಾರದ ಅನುಭವವನ್ನ ಹಂಚಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಕಿಚ್ಚ ಸುದೀಪ್, ಸಿನಿಮಾ ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸವಿಲ್ಲ. ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದೇವೆ. ಜನರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಸದ್ಯ ರಾಜಕೀಯದ ಬಗ್ಗೆ ನಾನು ಮಾತಾನಾಡುವುದಿಲ್ಲ. ನನಗೆ ಸಿನಿಮಾದಲ್ಲಿ ಕೆಲಸ ಮಾಡಲು ಸಾಕಷ್ಟು ಕೆಲಸಗಳಿವೆ . ಸಿಎಂ ಬೊಮ್ಮಾಯಿ ಸರ್ಕಾರ ನಡೆಸುತ್ತಿದ್ದಾರೆ. ಸೇವೆ ಮಾಡ್ತಿದ್ದಾರೆ ಎಂದರು.
ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ನಟ ಕಿಚ್ಚ ಸುದೀಪ್, ಗೀತಾಕ್ಕರಿಗೆ ಆಲ್ ದಿ ಬೆಸ್ಟ್ ಹೇಳುತ್ತೇನೆ. ಗೀತಕ್ಕ ಕೈಗೊಂಡಿರುವ ನಿರ್ಧಾರದ ಹಿಂದೆ ಒಳ್ಳೆಯ ಆಲೋಚನೆ ಇರುತ್ತದೆ. ಗೀತಕ್ಕರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
Key words: no difference- between- cinema – political – Actor -Kichcha Sudeep.