ಬೆಂಗಳೂರು,ಮೇ,,11,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ 2ನೇ ಅಲೆ ತಡೆಗಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಅನಗತ್ಯವಾಗಿ ಹೊರ ಬರುವವರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡುತ್ತಿದ್ದರು. ಆದರೆ ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಪೊಲೀಸರ ಲಾಠಿಚಾರ್ಜ್ ಗೆ ಬ್ರೇಕ್ ಬಿದ್ದಿದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂದಿನಿಂದ ಪೊಲೀಸರು ಲಾಠಿ ಬೀಸುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಲಾಕ್ ಡೌನ್ ಹಿನ್ನೆಲೆ ಜನರನ್ನ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಲಪ್ರಯೋಗದ ಮಾಡದೆ ಲಾಕ್ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿ ಬೇಕು ಎಂದು ಹೇಳಿದರು.
ಬಲಪ್ರಯೋಗ ಮಾಡದೇ ಲಾಕ್ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 14 ದಿನಗಳ ಅವಧಿಯಲ್ಲಿ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ. ಹೀಗಾಗಿ ಜನರ ಸಹಕಾರ ಅತಿ ಮುಖ್ಯವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Key words: No lathicharge – police-Strict action – control –people- Home Minister- Basavaraja Bommai.