ತುಮಕೂರು,ಜುಲೈ,5,2021(www.justkannada.iin): ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ. ಆತಂಕ ಬೇಡ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಎಸ್. ಸುತ್ತಮುತ್ತಲಿನ 10 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನೊಟೀಸ್ ಕೊಟ್ಟು ಮುಚ್ಚಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದರು. ಈ ಹೇಳಿಕೆ ಕುರಿತು ಬೆಳಿಗ್ಗೆ ಸಿಎಂ ಭೇಟಿ ಬಳಿಕ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಕೆಆರ್ ಎಸ್ ಡ್ಯಾಂ ಸೋರುತ್ತಿದ್ದರೇ ಅದು ಸೋರದಂತೆ ಸಂಸದೆ ಸುಮಲತಾರನ್ನ ಮಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
Key words: no leakage – KRS- Dam- Minister- Murugesh Nirani.