ವಿಜಯಪುರ,ಸೆಪ್ಟಂಬರ್,2,2023(www.justkannada.in): ಸರಿಯಾಗಿ ಮಳೆಯಾಗದೆ ಕೆಆರ್ ಎಸ್ ಭರ್ತಿಯಾಗದಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Key words: no need -worry -about –Cauvery water – DCM-DK Shivakumar.