ಬೆಂಗಳೂರು,ಸೆಪ್ಟಂಬರ್,6,2024 (www.justkannada.in): ಮಹದಾಯಿ ಯೋಜನೆಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕರ್ನಾಟಕದ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಗೋವಾ ವಿದ್ಯುತ್ ಯೋಜನೆಗೆ ಕೇಂದ್ರದವರು ಅನುಮತಿ ಕೊಡುತ್ತಾರೆ ಆದರೆ ಮಹದಾಯಿ ಯೋಜನೆಗೆ ಅನುಮತಿ ನೀಡಲ್ಲ. ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ತಾರತಮ್ಯ ತೋರಿದೆ ಎಂದು ಕಿಡಿಕಾರಿದರು.
ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ಮಾಡಿದ ಹಿನ್ನಲೆ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Key words: No permission, Mahadayi project, Minister, Santosh Lad