ನವದೆಹಲಿ,ಜನವರಿ,17,2022(www.justkannada.in): ಯಾವುದೇ ವ್ಜಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ ವ್ಯಕ್ತಿ ಅನುಮತಿ ಇಲ್ಲದೇ ಲಸಿಕೆ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿ ಸ್ಪಷ್ಟನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಕೊವಿಡ್ ಲಸಿಕೆ ಪಡೆದುಕೊಳ್ಳುವ ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತದ ಲಸಿಕೆಯನ್ನು ಕಲ್ಪಿಸುವುದಿಲ್ಲ. ಲಸಿಕೆ ಪ್ರಮಾಣಪತ್ರಗಳನ್ನು ಪಡೆಯುವುದಕ್ಕಾಗಿ ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಎಸ್ಒಪಿ ನೀಡಿಲ್ಲ ಎಂದು ಕೇಂದ್ರ ಸುಪ್ರೀಂಕೋರ್ಟ್ಗೆ ಹೇಳಿದೆ.
“ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ಹಾಕಲಾಗುವುದಿಲ್ಲ.. ಪ್ರಸ್ತುತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೊವಿಡ್ಗಾಗಿ ವ್ಯಾಕ್ಸಿನೇಷನ್ ದೊಡ್ಡ ಸಾರ್ವಜನಿಕ ಹಿತಾಸಕ್ತಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸಲ್ಲಿಸಿದ ಅಫಿಡವಿಟ್ ತಿಳಿಸಿದೆ.
Key words: No person- e forcibly- vaccinated-Supreme court