ಬೆಳಗಾವಿ, ಅಕ್ಟೋಬರ್,3,2023(www.justkannada.in): ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿಫಾರಸು ಪತ್ರ ಬರೆದಿದ್ದಾರೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ, ಗಲಭೆ ಪ್ರಕರಣಗಳನ್ನ ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ಗಳು ಹಿಂಪಡೆಯುವ ವಿಚಾರ ಸಂಬಂಧ ಬೆಳಗಾವಿ ಏರ್ಪೋರ್ಟ್ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು. ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.
Key words: no proposal – withdraw -riot –cases- CM -Siddaramaiah.