ಬೆಂಗಳೂರು,ಆಗಸ್ಟ್,23,2022(www.justkannada.in): ಎಸಿಬಿ ರದ್ಧು ಮಾಡಿದ್ಧ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವರದಿಯಾದ ಹಿನ್ನೆಲೆ ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಎಸಿಬಿ ರದ್ಧು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ . ಹೈಕೋರ್ಟ್ ಆದೇಶ ಅನುಷ್ಟಾನಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Key words: no question – cancellation – ACB-order- CM Bommai