ಮೈಸೂರು,ಜನವರಿ,3,2021(www.justkannada.in): ನಂದಿನಿ ನಕಲಿ ತುಪ್ಪ ಪತ್ತೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕೆ ಎಂ ಎಫ್ ನ ಸಿಬ್ಬಂದಿಗಳು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಮೈಸೂರು-ಚಾಮರಾಜನಗರ ಹಾಲು ಒಕ್ಕೂಟದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಸಚಿವ ಎಸ್ ಟಿ ಸೋಮಶೇಖರ್ ನಕಲಿ ನಂದಿನಿ ತುಪ್ಪ ಪ್ರಕರಣ ಸಂಬಂಧ ಮಾಹಿತಿ ನೀಡಿದರು. ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ಯಾರೆಲ್ಲಾ ಭಾಗಿಯಾಗಿದ್ದಾರೆ. ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಕಲಿ ನಂದಿನಿ ಉತ್ಪನ್ನಗಳನ್ನು ಪತ್ತೆ ಹಚ್ಚಲು ಏಳು ಮಂದಿಯನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡುವ ಬಗ್ಗೆ ತಿಳಿದರೆ ಆ ಸ್ಥಳಕ್ಕೆ ಹೋಗಿ ಸಮಿತಿಯ ಸದಸ್ಯರು ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದರು.
ನಂದಿನಿ ನಕಲಿ ತುಪ್ಪ ಪತ್ತೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕೆ ಎಂ ಎಫ್ ನ ಸಿಬ್ಬಂದಿಗಳು ಪ್ರಕರಣದಲ್ಲಿ ಭಾಗಿಯಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಪ್ರಕರಣ ಸಂಬಂಧ ಬಂಧಿಸಿರುವ ನಾಲ್ವರು ಆರೋಪಿಗಳು ವಿಭಿನ್ನ ಮಾಹಿತಿ ನೀಡಿದ್ದಾರೆ. ಪೊಲೀಸರ ತನಿಖೆ ವೇಳೆ ನಾಲ್ವರು ಆರೋಪಿಗಳು ಬೇರೆ ಬೇರೆ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಮಾಹಿತಿ ನೀಡಿದರು.
Key words: no question -protecting -anyone – Nandini counterfeit –ghee- detection- case-Minister- ST Somashekhar.