ಮೈಸೂರು,ಮೇ,20,2022(www.justkannada.in): ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿರುವ ವಿಚಾರ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು.ಯಾವುದೇ ಪಠ್ಯವನ್ನ ಕೈಬಿಟ್ಟಿಲ್ಲ ಎಂದರು.
ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಆರೋಪವನ್ನ ತಳ್ಳಿ ಹಾಕಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, SC, STಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿದ್ದೇ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್ ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ.
ಟೆಂಡರ್ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ.ಈಗಾಗಲೇ ತನಿಖಾಧಿಕಾರಿಯನ್ನ ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.
Key words: no question -quitting -Narayanaguru –text-Minister -Kota Srinivas Poojary.