ಹುಬ್ಬಳ್ಳಿ, ಸೆಪ್ಟೆಂಬರ್ 9,2023(www.justkannada.in): ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ..
ಜೆಡಿಎಸ್ , ಬಿಜೆಪಿಯ ಬಿಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.
ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ.
ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು :
ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.
ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ :
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.
ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.
ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ .
ಚುನಾವಣೆ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
Key words: No reply – center – all party- delegation- visit – CM Siddaramaiah
ENGLISH SUMMARY…
No reply from center to all-party delegation visit: Chief Minister Siddaramaiah
Hubballi, September 9:
Chief Minister Siddaramaiah the Prime Minister has not responded for the all party delegation which has written a letter seeking the Prime Minister’s time to press the Center about all the projects including Mahadayi, Upper Krishna and Cauvery dispute.
Speaking to the media at the Hubballi Airport today, he said that although the state government is ready to launch the Mahadayi project, the forest and environment clearance has not been obtained from the central government. He said that all related reports have been sent to the Centre.
JDS has no ideology
Responding to the report’s questions that JDS is BJP’s B team, they got annoyed with me when I said that JDS is BJP’s B team. The Janata Dal, a party that claims to be secular, has united with the communalists. Former Prime Minister Deve Gowda used to say that he would not join with other parties for any reason. But MLA G.T Deve Gowda is saying that he is joining hands with BJP for the survival of the party shows that JDS party has no ideology. He said that they have proved that they are ready to do anything for power.
Action regarding power supply to alleviate farmers’ problems
Reacting to a question on the farmers protesting again the irregular power supply, the CM said there was not enough rains in August, pumpsets should be properly maintained in summer. Due to this, a large amount of electricity is consumed. He said that measures are being taken to supply electricity by purchasing electricity from outside to solve the problems of farmers.
Not inviting opposition leader to G20 meeting is wrong:
Speaking about not inviting Congress leader Mallikarjuna Kharge for the G20 meeting in New Delhi, he said that Mallikarjuna Kharge is officially the Leader of the Opposition in the Lok Sabha and it is wrong not to invite him to the G20 meeting.
Request to Union Government for Revision of NDRF Guidelines:
A request has been submitted to the Center to revise the guidelines for providing relief to drought declared areas, but no response has been received so far. In the drought declared areas, the state government undertakes many measures including drinking water, assistance for sowing. But he said that timely help should come from the central government as well.
Not interested in national politics:
Responding to party fans hoping for Chief Minister Siddaramaiah to become Prime Minister, in a democracy,anyone can become a Prime Minister. Modi became a Prime Minister, directly from being the CM of Gujarath. He said that he has no interest in National politics.
Decision to take action against distribution cheap quality uniform
Reacting to the issues of Hijab, halal, hindutva and sanatana dharma which have cropped up when elections are round the corner, the CM said that hijab and halal cases are in the court. He said the cabinet has taken a decision to conduct an enquiry regarding the uniforms distributed to children under Vidyavikas scheme from Karnataka textiles organization. Since payment is also made, it has been decided that concerned people will be held responsible. Enquiry is underway and action will be taken for repayment of the amount from the concerned, he said.