ಈ ವರ್ಷ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ.

ಮೈಸೂರು, ಮೇ, 28,2024 (www.justkannada.in):  ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ., ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪೇಜ್ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.

ಶಾಲಾ ಮಕ್ಕಳ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಈಗಾಗಲೇ ಶೇ 95 ರಷ್ಟು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗಿದೆ. ಈ ತಿಂಗಳ ಒಳಗೆ ಶೇ 100 ವಿತರಣೆ ಮಾಡುತ್ತೇವೆ ಎಂದರು.

 

Key words: No revision, textbooks, Madhu Bangarappa