ಮೈಸೂರು,ನವೆಂಬರ್,23,2022(www.justkannada.in): ನಾನು ಎಂದೂ ಬಿಜೆಪಿ ಪರವಾಗಿ ಮಾತನಾಡಿಲ್ಲ. ಬಿಜೆಪಿ ಪರವಾಗಿ ಸಾಫ್ಟ್ ಕಾರ್ನರ್ ತೋರಿಲ್ಲ ಎಂದು ಶ್ರಿರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಪ್ರಮೋದ್ ಮುತಾಲಿಕ್, ಬಿಜೆಪಿಗೆ ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಬೈದವನು ನಾನು. ಬಿಜೆಪಿಯನ್ನ ಮೊದಲಿನಿಂದಲೂ ಟೀಕಿಸುತ್ತಾ ಬಂದಿದ್ದೇನೆ. ಕೇವಲ ಹಿಂದುತ್ವದ ವಿಚಾರವಾಗಿ ಗಟ್ಟಿ ಧ್ವನಿಯಲ್ಲಿ ಮಾತಾಡುತ್ತಿದ್ದೀನಿ ಎಂದರು.
ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ನನಿ ಎತ್ತಿದವನೇ ನಾನು 3 ಸಾವಿರ ಹೆಣ್ಣುಮಕ್ಕಳನ್ನ ಲವ್ ಜಿಹಾದ್ ನಿಂದ ನಾವು ಪಾರು ಮಾಡಿದ್ದೇವೆ. ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿ ಮಾಡಬೇಕು. ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ. ನಿಮ್ಮ ಜತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ. ಲವ್ ಜಿಹಾದ್ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
Key words: No- soft corner – BJP-mysore-Pramod Muthalik
ENGLISH SUMMARY…
“I don’t have a soft corner towards BJP”: Pramod Mutalik demands govt. to form a law against Love Jihad
Mysuru, November 23, 2022 (www.justkannada.in): “I never supported or spoken anything to please the BJP. I don’t soft corner towards the BJP,” observed Sriramasene Chief Pramod Mutalik.
Speaking in Mysuru today, he said, “I have spoken more harshly against the BJP than Siddaramaiah. I have been criticizing that party since the beginning. I speak with a loud voice only regarding Hindutwa.”
“I demand the government to make a separate law to prevent Love Jihad. I am urging the Chief Minister to look at this matter at the earliest, as the number of love jihad cases is increasing day by day in our State. It was I who raised the voice against love jihad. I have saved nearly 3,000 girls from getting trapped to love jihad. I request the Hindu girls to first understand the difference between Abdullah and Ashok. Otherwise, their fate will also be the same as the girl whose body was cut into pieces in Delhi. I request them not to kill our religion along with them. A separate law is required to control those cases,” he explained.
Keywords: Pramod Mutalik/ love jihad/ separate law