ಬೆಂಗಳೂರು, ಆಗಸ್ಟ್ 28, 2022 (www.justkannada.in): ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸೂಪರ್ಟೆಕ್ ಅವಳಿ ಕಟ್ಟಡಗಳನ್ನು ಇಂದು ಮಧ್ಯಾಹ್ನ 2.30 ಕ್ಕೆ ನೆಲಸಮಗೊಳ್ಳಲಿವೆ.
9 ವರ್ಷಗಳ ಸುದೀರ್ಘ ಹೋರಾಟಕ್ಕೆ ಅಂತ್ಯ ಹಾಡಲಾಗಿದ್ದು, ಇಂದು ಮಧ್ಯಾಹ್ನ ನೆಲಸಮಗೊಳಿಸಲು ಅಂತಿಮ ಕ್ಷಣದ ತಯಾರಿ ನಡೆದಿದೆ.
ನೋಯ್ಡಾದ ಸೆಕ್ಟರ್ 93A ನಲ್ಲಿರುವ ಸೂಪರ್ಟೆಕ್ ಅವಳಿ ಕಟ್ಟಡಗಳಾಗಿರುವ ಅಪೆಕ್ಸ್ (32 ಮಹಡಿಗಳು) ಮತ್ತು ಸೆಯಾನೆ (29 ಮಹಡಿಗಳು) ಟವರ್ಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅನೇಕ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿತ್ತು.
ಒಂಬತ್ತು ವರ್ಷಗಳ ನಂತರ ನಿವಾಸಿಗಳು ನಿಯಮಗಳ ಉಲ್ಲಂಘನೆಯನ್ನು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಲಹಾಬಾದ್ ಹೈಕೋರ್ಟ್ ಮತ್ತು ನಂತರ ಸುಪ್ರೀಂಕೋರ್ಟ್ನಲ್ಲಿ 9 ವರ್ಷಗಳ ಸುದೀರ್ಘ ಕಾನೂನು ಹೋರಾಟ ನಡೆಸಲಾಗಿತ್ತು.
ನಿಯಮಾವಳಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವುದು ದೃಢಪಟ್ಟ ನಂತರ ಸುಪ್ರೀಂಕೋರ್ಟ್ನಿಂದ ಕಟ್ಟಡಗಳ ನೆಲಸಮಕ್ಕೆ ಆದೇಶ ನೀಡಲಾಗಿತ್ತು.