ಬೆಂಗಳೂರು,ಏಪ್ರಿಲ್, 15,2024 (www.justkannada.in): ಮೇ 7 ರಂದು ನಡೆಯಲಿರುವ 2ನೇ ಹಂತದ ಚುನಾವಣೆಗೆ ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದರೇ 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ವೋಟಿಂಗ್ ನಡೆಯಲಿದೆ. 2ನೇ ಹಂತದ ಚುನಾವಣೆಗೆ ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ,ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ , ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ ಮಾಡಿದರು.
ಇನ್ನು ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತೊಮ್ಮೆ ಸಾಂಕೇತಿಕವಾಗಿ ಉಮೇದುವಾರಿಕೆ ಮಾಡಿದರು.
ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಸೀಮಿತ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಿದರು.
Key words: Nomination, many, candidates, election.