ಬೆಂಗಳೂರು,ಮೇ,13,2024 (www.justkannada.in): ವಿಧಾನಪರಿಷತ್ ಚುನಾವಣೆಗೆ ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಮ್ಮಅಭ್ಯರ್ಥಿಗಳೇ ಗೆಲವು ಸಾಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Key words: Nomination, MLC elections, CM Siddaramaiah