ನವದೆಹಲಿ,ಡಿ,18,2019(www.justkannada.in): ನಾನು ನೀರಾವರಿ ಖಾತೆಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಒತ್ತಡ ಹಾಕಿಲ್ಲ. ಖಾತೆ ಹಂಚುವುದು ಸಿಎಂಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಜಲಸಂಪನ್ಮೂಲ ಖಾತೆಗಾಗಿ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ನಡೆಯುತ್ತಿದೆ. ನೀರಾವರಿ ಖಾತೆಗಾಗಿ ಸಿಎಂ ಬಿಎಸ್ ವೈ ಮೇಲೆ ಒತ್ತಡ ಹಾಕಿದ್ದಾರೆ ಎಂದು ಸುದ್ದಿ ಹರಡಿತ್ತು. ಈ ಬಗ್ಗೆ ಇಂದು ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಬಸವರಾಜ ಬೊಮ್ಮಾಯಿ, ನಾನು ನೀರಾವರಿ ಖಾತೆ ಬೇಕೆಂದು ಹೇಳಿಲ್ಲ. ಅಂಥ ಯಾವುದೇ ಚರ್ಚೆಗಳು ಆಗಿಲ್ಲ ಯಾವುದೇ ವಿಷಯದಲ್ಲಿ ನಾನು ಮಧ್ಯಪ್ರವೇಶ ಮಾಡಿಲ್ಲ ಯಾರಿಗೆ ಯಾವ ಖಾತೆ ಕೊಡಬೇಕೆಂಬುದು ಸಿಎಂ ಅಧಿಕಾರ ಅದು ಸಿಎಂ ವಿವೇಚನೆ ಬಿಟ್ಟಿದ್ದು ಎಂದರು.
ಹಣಕಾಸು ಸಚಿವರು ಸಭೆ ಹಿನ್ನೆಲೆ ದೆಹಲಿಗೆ ಆಗಮಿಸಿದ್ದೇನೆ. ಹೈದರಾಬಾದ್ ಕರ್ನಾಟಕ ಮತ್ತಿತರ ಹಿಂದುಳಿದ ಪ್ರದೇಶಗಳಿಗೆ ಹಾಗೂ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೇಳುತ್ತೇವೆ. ಪೌಷ್ಟಿಕ ಆಹಾರ ಮತ್ತಿತರ ಯೋಜನೆಗಳಿಗೂ ಹೆಚ್ಚಿನ ಅನುದಾನ ಕೇಳಲಿದ್ದೇವೆ 2 ನೀರಾವರಿ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಳಲಿದ್ದೇವೆ ಪ್ರವಾಹ ಪರಿಹಾರಕ್ಕಾಗಿ ಇನ್ನೂ ಹೆಚ್ಚಿನ ಬೇಡಿಕೆ ಇಡಲಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Key words: not – pressure – CM BS Yeddyurappa- irrigation minister post-Home Minister -Basavaraja Bommai.