ಮೈಸೂರು,ಜುಲೈ,23,202(www.justkannada.in): ಸಿಎಂ ಅಭ್ಯರ್ಥಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ನಡುವೆ ಪರೋಕ್ಷ ಪೈಪೋಟಿ ಉಂಟಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಫಲಿತಾಂಶಕ್ಕೆ ಮುನ್ನವೇ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ ಎಂದು ಚಾಟಿ ಬೀಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ‘ಕೈ’ ನಾಯಕ ಮಲ್ಲಿಕಾರ್ಜುನ ಖರ್ಗೆ, ಚುನಾವಣೆ ಫಲಿತಾಂಶಕ್ಕೆ ಮುನ್ನವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ. ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈ ಕಮಾಂಡ್ ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂಬುದನ್ನ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಭಾರಿ ಆ ಭಾರಿ ಅಂತಲ್ಲ. ನಮ್ಮದು ಯಾವಗಲೂಸಾಸಮೂಹಿಕ ನಾಯಕತ್ವ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶ ಎಂದರು.
ರಾಜ್ಯ ರಾಜಕಾರಣಕ್ಕೆ ಖರ್ಗೆ ಮರಳುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನೀವು ಅವಕಾಶ ಕೊಟ್ಟರೆ(ಮಾಧ್ಯಮದವರು) ಬರುತ್ತೇನೆ. ಎಲ್ಲಾ ಸೇರಿ ಚಾನ್ಸ್ ಕೊಟ್ಟರೆ ನೋಡಣಾ ಎಂದರು.
ರಾಜಕಾರಣದಿಂದ ಬಿಎಸ್ ಯಡಿಯೂರಪ್ಪ ನಿವೃತ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಅದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನು ಮಾತನಾಡಲ್ಲ. ಎಲ್ಲರಿಗೂ ಅವರ ಅವರದ್ಧೆ ತೀರ್ಮಾನಗಳನ್ನ ತೆಗೆದುಕೊಳ್ಳುವ ಸ್ವತಂತ್ರ ಇರುತ್ತದೆ. ನಾವು ಯಾರೇ ಇರಲಿ ಬಿಡಲಿ ದೇಶ ಅಂತೂ ಇರುತ್ತದೆ. ನಾನಿಲ್ಲ ಅಂದ್ರೆ ಇನ್ನೊಬ್ರು ಬರುತ್ತಾರೆ. ಹಾಗೇ ಯಡಿಯೂರಪ್ಪ ಯೋಚನೆ ಮಾಡಿರಬಹುದು ಎಂದು ಹೇಳಿದರು.
ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ದೇಶಕ್ಕಾಗಿ ಮನೆಯವರನ್ನೇ ಕಳೆದುಕೊಂಡವರು ಒಂದು ಕೋಟಿ ರೂಪಾಯಿ ಅವ್ಯವಹಾರ ಮಾಡುತ್ತಾರೇನ್ರಿ. ಗಾಂಧಿ ಕುಟುಂಬವನ್ನ ವಿಚಾರಣೆಗೆ ಕರೆದ ಕೂಡಲೇ ನಾವು ಮಾನಸಿಕವಾಗಿ ಕುಗ್ಗುವುದಿಲ್ಲ. ಸ್ವತಂತ್ರ ಹೋರಾಟ ಮಾಡಿ, ಚಳುವಳಿಗಳನ್ನ ತ್ಯಾಗ ಬಲಿದಾನ ಮಾಡಿರುವ ಪಕ್ಷ ಕಾಂಗ್ರೆಸ್. ನಮ್ಮನ್ನ ಬಿಜೆಪಿಯವರು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ. ಸತ್ಯಗ್ರಹವೇ ಮಾಡದವರು, ತ್ಯಾಗ ಬಲಿದಾನ ಗೊತ್ತಿಲ್ಲದ ಬಿಜೆಪಿಯವರಿಂದ ನಮ್ಮನ್ನ ಹೆದರಿಸಲು ಸಾಧ್ಯವಿಲ್ಲ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಗಿಮಿಕ್ ಗಳನ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
Key words: not – say – CM -before – election- results- Mallikarjuna Kharge.