ನವದೆಹಲಿ,ಜ. 28,2020(www.justkannada.in): ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದರೆ ತಪ್ಪೇನಿದೆ?’ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿಯಲ್ಲಿ ತಪ್ಪೇನಿಲ್ಲ. ವಿವಿಧ ಪಕ್ಷದ ನಾಯಕರೇ ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸುತ್ತಾರೆ. ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ-ಸಿದ್ದರಾಮಯ್ಯ ಭೇಟಿಯಲ್ಲಿ ತಪ್ಪೇನಿದೆ. ನಾನೂ ಸಹ ಬಿಜೆಪಿ ನಾಯಕರನ್ನ ಭೇಟಿಯಾಗಿದ್ದೇನೆ. ಇದು ಸಹಜ ಎಂದು ಹೇಳಿದರು.
ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿಲ್ಲ. ಯಾವಲೀಡರ್ ಅನ್ನೂ ಭೇಟಿಯಾಗಿಲ್ಲ. ಬೇರಾವ ನಾಯಕರ ಮನೆಯ ಮೆಟ್ಟಿಲನ್ನೂ ತುಳಿದಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನಷ್ಟೇ ಭೇಟಿ ಮಾಡಿದ್ದೇನೆ. ಅದೂ ಕೂಡ ಸೌಜನ್ಯದ ಭೇಟಿ’ ಎಂದು ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.
Key words: nothing- wrong – meeting -Siddaramaiah-mallikarjuna Kharge-Former Minister -DK Shivakumar