ಬೆಂಗಳೂರು,ಆ,27,2019(www.justkannada.in): ಖಾತೆ ಹಂಚಿಕೆ ಕಗ್ಗಂಟು ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಕೆ ಎಸ್ ಈಶ್ವರಪ್ಪ ಮತ್ತು ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಕ್ಕೆ ಅಭಿಮಾನಿಗಳಿಂದ ಅಕ್ರೋಶ ವ್ಯಕ್ತವಾಗಿದೆ.
ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳ ಅಸಮಾಧಾನ ತಣ್ಣಗಾಗಿಸಲು ಸಚಿವ ಕೆ.ಎಸ್ ಈಶ್ವರಪ್ಪ ಮುಂದಾಗಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಕೆ.ಎಸ್ ಈಶ್ವರಪ್ಪ, ಈಗ ನಮ್ಮೆಲ್ಲರ ದೃಷ್ಠಿ ರಾಜ್ಯದ ಅಭಿವೃದ್ಧಿಯ ಮೇಲೆ ಮಾತ್ರ ಇರಬೇಕು. ಅತಿವೃಷ್ಠಿ-ಅನಾವೃಷ್ಠಿಯಿಂದ ಬಳಲಿರುವ ಜನರಿಗೆ ಬೆಂಬಲಗಾಗಿ ನಿಲ್ಲಬೇಕು. ಪಕ್ಷದ ವರಿಷ್ಠರು ನಿರ್ಧರಿಸಿ ನಿಯೋಜಿಸಿರುವ ಜವಾಬ್ಧಾರಿಯನ್ನು ನಿಭಾಯಿಸಲು ನಾವು ಕಾರ್ಯ ತತ್ಪರರಾಗಬೇಕು. ಯಾವುದೇ ಪ್ರತಿಭಟನೆ, ಅಸಮಾಧಾನಕ್ಕೆ ಆಸ್ಪದ ಕೊಡಬಾರದು ಎಂದು ನನ್ನ ಕಳಕಳಿಯ ಮನವಿ ಎಂದು ಹೇಳಿದ್ದಾರೆ.
ಅತ್ತ ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೇ ಇತ್ತ ಖಾತೆ ಹಂಚಿಕೆ ನಂತರ ತಮಗೆ ಇಷ್ಟವಾದ ಖಾತೆ ಸಿಗದಿದ್ದಕ್ಕೆ ಕೆಲ ಸಚಿವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಡಿಸಿಎಂ ಸ್ಥಾನವನ್ನು ಅಲಂಕರಿಸಿದ್ದರು. ಆದರೆ ಈ ಬಾರಿ ಅವರಿಗೆ ಮತ್ತೆ ಡಿಸಿಎಂ ಪೋಸ್ಟ್ ನೀಡದ ಹಿನ್ನೆಲೆ ಅವರ ಅಭಿಮಾನಿಗಳು ಅಕ್ರೋಶ ಹೊರಹಾಕಿದ್ದಾರೆ.
Key words: Now – must- focus – development – state – Minister- K. S Eshwarappa