ಚಾಮರಾಜನಗರ, ಮೇ.21, 2024: (www.justkannada.in news) ರಾಜ್ಯದ ಮಹಿಳಾ ಶಿಕ್ಷಕರಿಗೆ ಕಾಂಗ್ರೆಸ್ ಸರಕಾರ ಉಚಿತ ಬಸ್ ವ್ಯವಸ್ಥೆಯನ್ನೂ ಮಾಡಿದೆ. ಎನ್.ಪಿ.ಎಸ್ ಮತ್ತು ಓ.ಪಿ.ಎಸ್ ಕುರಿತು ಒಂದು ಸ್ಪಷ್ಟ ನಿರ್ಧಾರವನ್ನು ಸರ್ಕಾರದ ತೆಗೆದುಕೊಳ್ಳುತ್ತಿದೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಮರಿತಿಬ್ಬೇಗೌಡ ಭರವಸೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದಿಷ್ಟು..
ಇದೇ ಜೂನ್ 3 ರಂದು ನಡೆಯುವ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧೆ ಮಾಡಿದ್ದೇನೆ. ಕಳೆದ ನಾಲ್ಕು ಬಾರಿ ನನ್ನ ಸತತ ಗೆಲುವಿಗೆ ಚಾಮರಾಜನಗರ ಜಿಲ್ಲೆಯ ಶಿಕ್ಷಕ ಮತದಾರರೂ ಕಾರಣರಾಗಿದ್ದಾರೆ. ನನಗೆ ಹೆಚ್ಚಿನ ಮತನೀಡುವ ಮೂಲಕ ನನ್ನನ್ನು ಗೆಲ್ಲಿಸಿದ್ದಾರೆ. ಅವರಿಗೆ ನಾನು ಧನ್ಯವಾದ ತಿಳಿಸಲು ಬಯಸುತ್ತೇನೆ.
ಈಗ ಐದನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಅಂದರೆ ನನ್ನ ತವರು ಪಕ್ಷದಿಂದ ಮತ್ತೆ ನನಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಜಾರಿಗೆ ತಂದಿದ್ದಾರೆ, ಹಲವು ಶೈಕ್ಷಣಿಕ, ಸಾಮಾಜಿಕ ಪ್ರಗತಿಗಾಗಿ ಸಾಕಷ್ಟು ಯೋಜನೆ ತಂದಿದ್ದಾರೆ.
ಮಹಿಳಾ ಶಿಕ್ಷಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದಾರೆ. ಎನ್ಪಿಎಸ್ ಮತ್ತು ಓಪಿಎಸ್ ಕುರಿತು ಒಂದು ಸ್ಪಷ್ಟ ನಿರ್ಧಾರವನ್ನು ಸರ್ಕಾರ ಸದ್ಯದಲ್ಲೇ ತೆಗೆದುಕೊಳ್ಳುತ್ತಿದೆ. ಆ ಮೂಲಕ ಶಿಕ್ಷಕರಿಗೆ ಯಾವುದೇ ರೀತಿ ಅನ್ಯಾಯವಾಗಲು ಆಸ್ಪಧ ನೀಡುವುದಿಲ್ಲ ಎಂದರು.
ಮೈಸೂರಿನ ಮಹಾರಾಣಿ ಕಾಲೇಜು ಅಭಿವೃದ್ಧಿಗೆ ಸುಮಾರು 179 ಕೋಟಿ ರೂ. ಅನುದಾನವನ್ನು ಕಾಂಗ್ರೆಸ್ ಸರಕಾರ ಕೊಟ್ಟಿದೆ. ಶಿಕ್ಷಕರ ಹಲವಾರು ಸಮಸ್ಯೆಗಳನ್ನ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆಲಿಸಿ ಪರಿಹರಿಸುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ, ಈ ಬಾರಿ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ನನ್ನನ್ನು ಶಿಕ್ಷಕ ಬಂಧುಗಳು ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಸುದ್ದಿ ಗೋಷ್ಠಿ ಮೂಲಕ ಮರಿತಿಬ್ಬೇಗೌಡ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಪಿ. ಮರಿಸ್ವಾಮಿ , ಕೆಪಿಸಿಸಿ ಕಾರ್ಯದರ್ಶಿ ಹಾಗೂ ಚಾಮರಾಜನಗರ ಜಿಲ್ಲಾ ಚುನಾವಣಾ ಉಸ್ತುವಾರಿ ಶ್ರೀಕಂಠ ಮತ್ತಿತರರು ಹಾಜರಿದ್ದರು.
key words: Govt will take, clear stand, on NPS and OPS, Marithibbegowda
summary:
The Congress government has also arranged free buses for women teachers in the state. South Teachers’ constituency candidate Marithibbegowda assured that the government is taking a clear decision on NPS and OPS.
Now for the fifth time, I have got a ticket again from the Congress party i.e. from my home party. Cm Siddaramaiah has implemented several schemes for teachers and students in the Congress government, many for educational and social progress.