ವಾಲ್ಮಿಕಿ ನಿಗಮದ ಅಧಿಕಾರಿ ಆತ್ಮಹತ್ಯೆ: ಇಡೀ ಸಂಪುಟವೇ ಶಾಮೀಲು- ಆರ್.ಅಶೋಕ್ ಗಂಭೀರ ಆರೋಪ.

ಬೆಂಗಳೂರು,ಮೇ,28,2024 (www.justkannada.in): ವಾಲ್ಮಿಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಸಚಿವ ಸಂಪುಟವೇ ಭಾಗಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. “ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು,  ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ವಾಲ್ಮಿಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಇಡೀ ಸಚಿವ ಸಂಫುಟವೇ ಶಾಮೀಲಾಗಿದೆ. ಈಶ್ವರಪ್ಪ ಮೇಲೆ ಆರೋಪ ಬಂದಾಗ ಏನೇಂದು ಹೇಳಿದ್ರು. ಸಿದ್ದರಾಮಯ್ಯ ಏನಂದಿದ್ದರು. ಈಗ ತಕ್ಷಣವೇ ಸರ್ಕಾರ ರಾಜೀನಾಮೆ ನೀಡಬೇಕು. ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ರಲ್ವಾ..?  ಈಗ ಸರ್ಕಾರ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

Key words: officer-suicide-cabinet- involved- R. Ashok