ಮೈಸೂರು,ಜುಲೈ,22,2021(www.justkannda.in): ರಾಜ್ಯದಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಎಸ್.ಲಕ್ಷ್ಮೀದೇವಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿರುವ ಎಸ್.ಲಕ್ಷ್ಮೀದೇವಿ ಅವರು, ರಾಜ್ಯ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದ್ದರು. ಈಗಾಗಲೇ ಸರ್ಕಾರದ ಅಧೀನ ಕಾರ್ಯದರ್ಶಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದೆ. ಇದರಿಂದಾಗಿ ಸಮುದಾಯಕ್ಕೆ ಹೆಚ್ಚಿನ ಅನುಕೂಲ ವಾಗುತ್ತದೆ ಎಂದು ಹೇಳಿದ್ದಾರೆ.
ಒಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡಕಾರ ಒಕ್ಕಲಿಗ, ದಾಸಒಕ್ಕಲಿಗ, ರೆಡ್ಡಿ ಒಕ್ಕಲಿಗ, ಕುಂಚಿಟಿಗ ಗೌಡ, ಕಾ.ಪು, ರೆಡ್ಡಿ, ಗೌಂಡರ್, ನಾಮಧಾರಿ ಗೌಡ… ಹೀಗೆ ಹಲವು ಜಾತಿಗಳು ಇದರಲ್ಲಿ ಸೇರಿಕೊಳ್ಳುತ್ತವೆ. ಈ ಎಲ್ಲ ಸಮಾಜಗಳ ಅಭಿವೃದ್ಧಿಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ಆ ಮೂಲಕ ಎಲ್ಲ ಜಾತಿಯ ಉಪ ಜಾತಿಯ ಒಕ್ಕಲಿಗರು ಒಂದೇ ಸಮುದಾಯವಾಗಿ ಗುರುತಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಎಸ್.ಲಕ್ಷ್ಮೀದೇವಿ ತಿಳಿಸಿದ್ದಾರೆ.
Key words: Official – Okaliga Development Corporation-CM BS yeddyurappa- muda member-Lakshmidevi