ಬೆಂಗಳೂರು, ಮಾರ್ಚ್ 26, 2022 (www.justkannada.in): ಸತತ ನಾಲ್ಕನೆ ದಿನವೂ ತೈಲಬೆಲೆ ಏರಿಕೆಯಾಗಿದೆ.
ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾ ತೈಲಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರಲ್ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು.
ಇದರ ಪರಿಣಾಮ ಭಾರತದ ಸರ್ಕಾರಿ ತೈಲ ಕಂಪೆನಿಗಳು ಇಂಧನ ದರವನ್ನು ಕಳೆದ ನಾಲ್ಕು ದಿನಗಳಿಂದ ಏರಿಕೆ ಮಾಡುತ್ತಿವೆ. ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗಿದೆ.
ಮಾ.23ರಂದು 84 ಪೈಸೆ ಏರಿಕೆ ಮಾಡಲಾಗಿತ್ತು. ನಿರಂತರವಾಗಿ 80 ಪೈಸೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗುತ್ತಲೇ ಬಂದಿದೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ ಪ್ರತಿ ಲೀಟರ್ ಪೆಟ್ರೋಲ್ಗೆ 98.61ರೂ. ಹಾಗೂ ಡೀಸೆಲ್ 80 ಪೈಸೆ ಹೆಚ್ಚಳದ ಮೂಲಕ 89.87ರೂ. ಆಗಿದೆ.