ಬೆಂಗಳೂರು,ಏಪ್ರಿಲ್,21,2025 (www.justkannada.in): ಪತ್ನಿಯಿಂದಲೇ ಹತ್ಯೆಗೀಡಾದ ನಿವೃತ್ತ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ನಿನ್ನೆ ಪತ್ನಿ ಪಲ್ಲವಿ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು ಈಗಾಗಲೇ ಪತ್ನಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಓಂ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಲ್ಲಿರುವ ಟೆನ್ನಿಸ್ ಕೋರ್ಟ್ ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಸಂಬಂಧಿಕರು, ಸ್ನೇಹಿತರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಬಳಿಕ ಪಾರ್ಥಿವಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪೊಲೀಸ್ ಪಡೆಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಪುತ್ರ ಅಗ್ನಿಸ್ಪರ್ಶ ಮಾಡಿದರು.
Key words: Retired DG-IGP, Om Prakash, Funeral