ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು ಈ ತೀರ್ಮಾನವನ್ನ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿರುವ ಜಮ್ಮುಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಅವರು, ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ. ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನ ಕೈಗೊಂಡಿದ್ದು, ಭಾರತದಲ್ಲಿರುವ ಪಾಕ್ ಪ್ರಜೆಗಳು ದೇಶವನ್ನ ತೊರೆಯುವಂತೆ ಈಗಾಗಲೇ ಸೂಚಿಸಿದೆ.
Key words: Jammu and Kashmir, CM, Omar Abdullah, welcomed, cancel, Sindhu River Agreement