ಶ್ರೀನಗರ, ಅಕ್ಟೋಬರ್,16,2024 (www.justkannada.in): ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದರು.
ಶ್ರೀನಗರದ ಶೇರ್ ಇ ಕಾಶ್ಮೀರ್ ಕನ್ವೆಷನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಮರ್ ಅಬ್ದುಲ್ ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವರು ಉಪಸ್ಥಿತರಿದ್ದರು.
Key words: Omar Abdullah, sworn, new CM, ammu and Kashmir