ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ.

ಬೆಳಗಾವಿ,ಜನವರಿ,5,2022(www.justkannada.in):  ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದ್ದಾರೆ.

ಬುಧವಾರ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಸಚಿವ ಅಶ್ವಥ್ ನಾರಾಯಣ್ ಮಾಧ್ಯಮಗಳ ಜತೆ ಮಾತನಾಡಿ, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ ಮುಕ್ತ ಅವಕಾಶ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.

ಪರಿಸ್ಥಿತಿ ಕೈಮೀರಿ ಹೋಗಬಾರದೆಂದು 15 ದಿನಗಳ ಮಟ್ಟಿಗೆ ಸರಕಾರವು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಂಪೂರ್ಣ ಲಾಕ್ ಡೌನನ್ನು ತಡೆಯುವುದೇ ಇದರ ಹಿಂದಿನ ಸದುದ್ದೇಶವಾಗಿದೆ. ಕಚೇರಿಗಳು ಸೇರಿದಂತೆ ಪಬ್, ಬಾರ್, ಚಿತ್ರಮಂದಿರ ಇತ್ಯಾದಿಗಳಲ್ಲಿ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಜನ ಸೇರುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಮುಂಜಾಗ್ರತಾ ಕ್ರಮಗಳ ಹಿಂದೆ ಮುಖ್ಯವಾಗಿ ಬೆಂಗಳೂರಿನಲ್ಲಿ ಪರಿಸ್ಥಿತಿಯನ್ನು ತಹಬಂದಿಗೆ ತರುವ ಚಿಂತನೆ ಇದೆ. ಹೀಗಾಗಿಯೇ ಅಲ್ಲಿ ಎರಡು ವಾರಗಳ ಮಟ್ಟಿಗೆ ಶಾಲಾಕಾಲೇಜುಗಳನ್ನು ಮುಚ್ಚಲಾಗಿದೆ. ಇದರ ಜತೆಯಲ್ಲೇ 15ರಿಂದ 18 ವರ್ಷದ ಯುವಜನರಿಗೂ ಕೊರೋನಾ ಲಸಿಕೆ ಹಾಕಲು ಆರಂಭಿಸಲಾಗಿದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಪಡಬೇಕಾಗಿಲ್ಲ ಎಂದು ಅವರು ಭರವಸೆಯ ಮಾತುಗಳನ್ನಾಡಿದರು.

ವೈದ್ಯಕೀಯ ಕಾಲೇಜುಗಳಲ್ಲೂ ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಬೂಸ್ಟರ್ ಡೋಸ್ ಕೊಡಲಾಗುತ್ತಿದ್ದು, ಪರಿಸ್ಥಿತಿಯನ್ನು ಎದುರಿಸಲು ಸಜ್ಜುಗೊಳಿಸಲಾಗಿದೆ. ಹತ್ತು ದಿನಗಳ ನಂತರ ಮತ್ತೊಮ್ಮೆ ಸಮಾಲೋಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ನುಡಿದರು.

Key words: Omicron- border-close- Minister -Ashwath Narayan

ENGLISH SUMMARY…

Increasing number of Omicron cases: Borders not to be closed-Minister Ashwathnarayan clarifies
Belagavi, January 25, 2022 (www.justkannada.in): “Though the number of corona and Omicron cases are increasing in the state, the State Government doesn’t have any plans to close the border areas of the state, including Belagavi,” opined Higher Education Minister Dr. C.N. Ashwathnaryan.
Speaking to the media persons today at Belagavi, he said, “measures have been taken in the border areas to check all those who come from other states. Monitoring and vigil have been increased. Anybody who has symptoms will be quarantined or controlled. However, transportation won’t be affected.”
He informed that the State Government has already taken certain measures like weekend curfew and other precautionary measures for 15 days to control the situation. “The government intends to prevent complete lockdown. Permission has been given to all the offices, pubs, bars, and cinema halls to function with 50% capacity,” he added.
Keywords: Higher Education Minister/ Dr. C.N. Ashwathnarayana/ COVID/ Omicron cases/ border areas