ಬೆಂಗಳೂರು,ಡಿಸೆಂಬರ್,2,2021(www.justkannada.in): ಬೆಂಗಳೂರನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, 46 ವರ್ಷದ ವ್ಯಕ್ತಿಗೆ ಮತ್ತು 66 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢವಾಗಿದೆ. 46 ವರ್ಷದ ವ್ಯಕ್ತಿಗೆ ನವೆಂಬರ್ 25 ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಇಂದು ಜಿನೋಮಿಕ್ ಸಿಕ್ವೆನ್ಸಿಂಗ್ ರಿಪೋರ್ಟ್ ನಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ವ್ಯಕ್ತಿಗೆ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ನ.20ಕ್ಕೆ ದ. ಆಫ್ರಿಕಾದಿಂದ 66 ವರ್ಷದ ವೃದ್ಧ ಬಂದಿದ್ದ. ನವೆಂಬರ್ 20 22 ರಂದು ಟೆಸ್ಟ್ ಮಾಡಿಸಿದ್ದವು. ಇಂದು ಬಂದ ಜಿನೋಮಿಕ್ ಸಿಕ್ವೆನ್ಸಿಂಗ್ ರಿಪೋರ್ಟ್ ನಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ದ್ವಿತೀಯ ಸಂಪರ್ಕಿತರ ಪೈಕಿ ಐವರಿಗೆ ಪಾಸಿಟಿವ್ ಬಂದಿದೆ. ಪ್ರಾಥಮಿಕ ದ್ವಿತೀಯ ಸಂಪರ್ಕಿತರಿಗೆ ಐಸೋಲೇಷನ್ ನಲ್ಲಿ ಇಡಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.
Key words: Omicron – two – Bengaluru-BBMP -chief commissioner- Gaurav Gupta-information