ಬೆಂಗಳೂರು,ಜ,11,2020(www.justkannada.in): ಶಾಲೆಗಳಲ್ಲಿ ವಾರಕ್ಕೆ ಒಂದು ದಿನ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬರುವ ಶೈಕ್ಷಣಿಕ ವರ್ಷದಿಂದ ಬ್ಯಾಗ್ ಲೆಸ್ ಡೇ ಜಾರಿ ತರಲಾಗುವುದು. ಈ ಬಗ್ಗೆ ಶಿಕ್ಷಣ ತಜ್ಞರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ ವಾರದಲ್ಲಿ ಒಂದು ದಿನ ಅಥವಾ ಹದಿನೈದು ದಿನಕ್ಕೊಮ್ಮೆ ವಿದ್ಯಾರ್ಥಿಗಳಿಗೆ ಬ್ಯಾಗ್ ಲೆಸ್ ಡೇ ಮಾಡಲಾಗುವುದು ಎಂದು ತಿಳಿಸಿದರು.
ನಾಟಕ ಸ್ವಚ್ಛತೆ ಹಾಡುಗಾರಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಶಿಕ್ಷಣ ನೀಡಲಾಗುವುದು. ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಕಡಿಮೆ ಮಾಡಲು ಕೂಡ ಚಿಂತಿಸಲಾಗಿದೆ. ಮುಂದಿನ ವಾರ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿ ಅಭಿಪ್ರಾಯ ಪಡೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
Key words: One day -per week – students- Bagless Day-Education Minister -Suresh Kumar