ಬೆಂಗಳೂರು,ಜೂನ್,3,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಮಹಾಮಾರಿ ತಡೆಯಲು ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನ ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸುದ್ಧಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು, ಜೂನ್ 7ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನ ಮತ್ತೆ ಜೂನ್ 14ರವರೆಗೆ ವಿಸ್ತರಣೆ ಮಾಡಲಾಗಿದೆ. 2ನೇ ಹಂತದಲ್ಲಿ ಸುಮಾರು 500 ಕೋಟಿ ಪ್ಯಾಕೇಜ್ ಅನ್ನ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.
ಮಗ್ಗ ಕಾರ್ಮಿಕರಿಗೆ ತಲಾ 3 ಸಾವಿರ, ಚಿತ್ರರಂಗ, ದೂರದರ್ಶನ ಕಲಾವಿದರಿಗೆ , ಆಶಾಕಾರ್ಯಕರ್ತೆಯರಿಗೆ, ಮೀನುಗಾರರಿಗೆ, ಅರ್ಚಕರಿಗೆ ಅಡುಗೆ ಕೆಲಸಗಾರರಿಗೆ ತಲಾ 3 ಸಾವಿರ ಪರಿಹಾರ ಹಾಗೂ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ತಲಾ 2 ಸಾವಿರ ಪರಿಹಾರವನ್ನ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.
ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುಧಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Key words: One week -lockdown -extension -again – state-500 crores – 2nd stage-CM bs yeddyurappa