ಬೆಂಗಳೂರು,ಜೂ,11,2020(www.justkannada.in): ರಾಜ್ಯದಲ್ಲಿ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಪಡಿಸಿ ನಿನ್ನೆಯಷ್ಟೆ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಅದನ್ನ 7ನೇ ತರಗತಿವರೆಗೆ ವಿಸ್ತರಣೆ ಮಾಡಲಾಗಿದೆ.
ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ ರದ್ದು ಮಾಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ ರದ್ದು ಮಾಡಲಾಗಿದೆ. ಆನ್ ಲೈನ್ ಶಿಕ್ಷಣ ರದ್ದು ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. 5ರ ಬದಲು 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಹಾಗೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಪ್ರಾಥಮಿಕ ಹಂತದ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಪಡಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ತಜ್ಞರ ಜತೆ ಸಮಾಲೋಚನೆ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ರಾಜ್ಯದಲ್ಲಿ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಘೋಷಣೆ ಮಾಡಿದ್ದರು.
Key words: Online Class -Cancellation –till- 7th standard – State.