ಬೆಂಗಳೂರು,ಜೂನ್,12,2021(www.justkannada.in): ವಿದ್ಯಾರ್ಥಿಗಳು ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಸುರೇಶ್ ಕುಮಾರ್, ಶಾಲಾ ಶುಲ್ಕ ಕಟ್ಟಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದ್ರೇ.. ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಾಲೆಗಳು ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡಿದ್ದರ ಬಗ್ಗೆ ಪೋಷಕರು ದೂರು ನೀಡಬಹುದು. ನನಗೆ ಇಲ್ಲವೇ ನಿಮ್ಮ ಶಾಲಾ ವ್ಯಾಪ್ತಿಯ ಬಿಇಓಗಳಿಗೆ ದೂರು ನೀಡಿದ್ರೆ ಸಾಕು, ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
Key words: Online class- cannot-bandh- Minister -Suresh Kumar -warns.