ಮೈಸೂರು,ಜುಲೈ,10,2021(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಜುಲೈ 17 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ
ಪ್ರೊ. ಆರ್. ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Online training -K-CET -examination –KSOU- Competitive Exam- Training Center.