ಆನ್‌ಲೈನ್ ಗೇಮಿಂಗ್ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿ : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು,ನವೆಂಬರ್,16,2020(www.justkannada.in)  : ರಮ್ಮಿ,ಪೋಕರ್ ಸೇರಿ ಆನ್ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿದ್ದು, ಈ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ರಾಜ್ಯ ಸರ್ಕಾರ ರಮ್ಮಿ ಸೇರಿದಂತೆ ಆನ್ ಲೈನ್ ಗೇಮ್ ಗಳಿಗೆ ಕಡಿವಾಣ ಹಾಕಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

kannada-journalist-media-fourth-estate-under-loss

ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ

ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ರಮ್ಮಿ,ಪೋಕರ್ ಸೇರಿ ಆನ್ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ನಾನೂ ಕೂಡ ಹಲವು ಯುವಕರು ಆನ್ಲೈನ್ ಜೂಜಿನಲ್ಲಿ ವ್ಯಸ್ತರಾಗಿರುವುದನ್ನುಗಮನಿಸಿದ್ದೇನೆ. ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ. ಹಾಗಾಗಿ, ಇಂತಹ ಗೇಮ್ಗಳ ಮೇಲೆ ಕಡಿವಾಣ ಬೀಳಬೇಕು ಎಂದು ಒತ್ತಾಯಿಸಿದ್ದಾರೆ.

Online-Gambling-Addiction-Many-young-people-die-Former-KPCC-president-Dinesh Gundurao 

ಬಾಜಿ ಕಟ್ಟಿ ಆಡುವುದು ಜೂಜು ಎಂಬುದು ನಿರ್ವಿವಾದ

ಆನ್ಲೈನ್ ಆಟ ‘game of skill-not a game of luck’ ಎಂಬ ಆಧಾರದ ಮೇಲೆ ಕಾನೂನಿನ ಮಾನ್ಯತೆ ಪಡೆದುಕೊಂಡಿದೆನಾನು ವಾದ ಒಪ್ಪುವುದಿಲ್ಲ. ನನ್ನ ಪ್ರಕಾರ ಹಣವನ್ನು ಬಾಜಿ ಕಟ್ಟಿ ಆಡುವುದು ಜೂಜು ಎಂಬುದು ನಿರ್ವಿವಾದ. ಇಂತಹ ಜೂಜಿಗೆ ವಿಶೇಷವಾಗಿ ಯುವಕರು ಆಕರ್ಷಿತರಾಗಿರುವುದು ದುರಂತ. ಸರ್ಕಾರ ಮನೆಹಾಳು ಗೇಮಿಂಗ್ಗಳ ಮೇಲೆ ನಿಷೇಧ ಹೇರಲಿ ಎಂದು ಆಗ್ರಹಿಸಿದ್ದಾರೆ.

Online-Gambling-Addiction-Many-young-people-die-Former-KPCC-president-Dinesh Gundurao 

key words : Online-Gambling-Addiction-Many-young-people-die-Former-KPCC-president-Dinesh Gundurao