ಮೈಸೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಅದನ್ನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಅಶೋಕ ರಸ್ತೆಯಲ್ಲಿರುವ ಮಿಲಾದ್ ಪಾರ್ಕ್ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಸಾವಿರಾರು ಮಂದಿ ಜಮಾವಣೆಯಾಗಿದ್ದಾರೆ. ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದರೂ ಅದನ್ನ ಧಿಕ್ಕರಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಪ್ರತಿಭಟನೆ ನಡೆಸದಂತೆ ಪೊಲೀಸರು ಎಚ್ಚರಿಕೆ ನೀಡಿದರೂ ಸಹ ಧರಣಿ ಮುಂದುವರೆಸಲಾಗಿದ್ದು ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವಿ ಮಾಡಿದರೂ ಪಟ್ಟಸಡಿಲಿಸದೆ ಪ್ರತಿಭಟನಾಕಾರರು ತಮ್ಮ ಹೋರಾಟ ಮುಂದುವರೆಸಿದರು.
ಬಳಿಕ 144 ಸಕ್ಷನ್ ಬಗ್ಗೆ ಪೋಲೀಸರು ತಿಳಿ ಹೇಳಿದ್ದು ಮಿಲಾದ್ ಪಾರ್ಕ್ ಹೊರವಹೋಗುವಂತೆ ಸೂಚಿಸಿದರು. ಕಾನೂನು ಉಲ್ಲಂಘನೆ ಮಾಡಬಾರದು. ಕಾನೂನೂನಿಗೆ ಗೌರ ಕೊಡಬೇಕು. ಕಾನೂನು ಉಲ್ಲಂಘನೆ ಆದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದರು. ಪೋಲೀಸರ ಎಚ್ಚರಿಕೆ ಬೆನ್ನಲ್ಲೆ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟು ಹೊರನಡೆದಿದ್ದಾರೆ.
Key words: Oppose – Citizenship Amendment Act-Protest -Mysore