ಮೈಸೂರು,ಜೂ,15,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರವನ್ನ ಸರ್ಕಾರ ಕೈಬಿಡಬೇಕು ಎಂದು ಮಾಜಿ ಸಂಸದ ಧೃವನಾರಾಯಣ್ ಆಗ್ರಹಿಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಜಲದರ್ಶಿನಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದ ಧೃವನಾರಾಯಣ್, ದೇಶದ ಬೆನ್ನುಲುಬನ್ನೆ ಮುರಿಯುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ದೇಶದಲ್ಲಿ ಆಹಾರ ಸಮಸ್ಯೆ ಇಲ್ಲ. ದೇಶದಲ್ಲಿ ದಾಖಲೆಯ ಪ್ರಮಾಣದ ಆಹಾರ ಧಾನ್ಯಗಳ ದಾಸ್ತಾನಿದೆ. ಇಂತಹ ಸಂದರ್ಭದಲ್ಲಿ ಈ ಕಾಯ್ದೆ ಅವಶ್ಯಕತೆ ಇದೆಯಾ..? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ದೇಶದಲ್ಲಿ ಬಡವರಿಗೆ ಕೆಲಸ ನೀಡುತ್ತಿರುವುದೇ ಕೃಷಿ ಕ್ಷೇತ್ರ. ಉಳುವವನೇ ಭೂಮಿಯ ಒಡೆಯ, ಬ್ಯಾಂಕ್ ಗಳ ರಾಷ್ಟ್ರೀಕರಣ ಮಾಡಿ ರೈತರಿಗೆ ಅನುಕೂಲ ಮಾಡಿದ್ದು ಇಂದಿರಾಗಾಂಧಿಯವರು. ಆದರೆ ಇಂದಿನ ಬಿಜೆಪಿ ಸರ್ಕಾರ ಅವುಗಳೆಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ಸರ್ಕಾರ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವುದನ್ನು ಕೈ ಬಿಡಬೇಕು. ಅದರ ಬದಲು ಗುಂಪು ಬೇಸಾಯಕ್ಕೆ ಪ್ರೋತ್ಸಾಹ ನೀಡಬೇಕು. ಕೃಷಿ ಕ್ಷೇತ್ರದಲ್ಲಿ ಸಹಕಾರ ಸಂಘಗಳನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು. ವಿನಃ ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಬಾರದು ಎಂದು ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಧ್ರುವನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.
2014 ರಿಂದಲೂ ಎನ್ ಡಿಎ ಸರ್ಕಾರ 20 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಇನ್ನಾದರೂ ಕೇಂದ್ರ ಸರ್ಕಾರ ಜನರ ಲೂಟಿ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಮಾಜಿ ಸಂಸದ ದೃವನಾರಾಯಣ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಯನ್ನು ಖಂಡಿಸಿದರು.
Key words: oppose- decision -Land Reform Act – Former MP -Dhruvanarayan -mysore