ಮೈಸೂರು,ಡಿ,16,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ದೇಶದಾದ್ಯಂತೆ ಪ್ರತಿಭಟನೆ ಕಾವು ಹೆಚ್ಚಾಗಿದ್ದು ಈ ನಡುವೆ ಮೈಸೂರಿನಲ್ಲಿ ಪ್ರತಿಭಟನೆ ಗೆ ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ನಗರದ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಲು ಸಂಘಟನೆಗಳು ನಿರ್ಧರಿಸಿವೆ ಎನ್ನಲಾಗಿದೆ. ಹೀಗಾಗಿ ಕೆ.ಪಿ. ಆ್ಯಕ್ಟ್ 35ರಡಿ ಪುರಭವನ ಸುತ್ತ, ಅಶೋಕ ರಸ್ತೆ, ಆಲ್ಬರ್ಟ್ ವಿಕ್ಟರ್ ರಸ್ತೆ, ಮಹಾವೀರ ವೃತ್ತ, ಗಾಂಧಿ ಚೌಕ ಸೇರಿದಂತೆ ಪುರಭವನ ಸುತ್ತಲಿನ 500 ಮೀ. ವ್ಯಾಪ್ತಿಗೆ ನಿಷೇಧ ಜಾರಿ ಮಾಡಲಾಗಿದೆ.
ಪುರಭವನದಲ್ಲಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಪ್ರತಿಭಟನೆ, ಬೈಕ್ ರ್ಯಾಲಿ, ಸಭೆ- ಸಮಾರಂಭ, ಮೆರವಣಿಗೆ ನಡೆಸದಿರಲು ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಸೂಚನೆ ನೀಡಿದ್ದಾರೆ.
Key words: Opposition – Citizenship Amendment Act-Prohibition – Mysore.