ಬೆಂಗಳೂರು,ಜುಲೈ,10,2023(www.justkannada.in): ಇಂದು ರಾಜ್ಯ ವಿಧಾನಸಭಾ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಸರ್ಕಾರದ ಐದು ಗ್ಯಾರಂಟಿ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆಯಿತು. ಈ ಸಮಯದಲ್ಲಿ ವಿಪಕ್ಷ ನಾಯಕ ಸ್ಥಾನದ ವಿಚಾರಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಲೆಳೆದರು.
ಗ್ಯಾರಂಟಿ ಜಾರಿ ಕುರಿತು ಕೊಟ್ಟ ಮಾತು ಈಡೇರಿಸಿಲ್ಲ ಎಂದು ಬಿಜೆಪಿ ಸದಸ್ಯರು ಸದನದಲ್ಲಿ ಆರೋಪಿಸಿದರು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಜೆ ಜಾರ್ಜ್ ನಡುವೆ ಮಾತಿನ ಚಕಮಕಿ ನಡೆಯಿತು.
ವಿರೋಧ ಪಕ್ಷದ ನಾಯಕನಾಗಲು ಶಾಸಕ ಯತ್ನಾಳ್ಗೆ ಆಸೆ ಇದೆ. ಹಾಗಾಗಿ ಪದೇಪದೆ ಎದ್ದು ಯತ್ನಾಳ್ ಮಾತನಾಡುತ್ತಿದ್ದಾರೆ. ಎಷ್ಟೇ ಬಾಯಿ ಬಡಿದುಕೊಂಡರೂ ವಿಪಕ್ಷ ನಾಯಕರನ್ನಾಗಿ ಮಾಡಲ್ಲ ಎಂದು ಹೇಳುವ ಮೂಲಕ ಸಚಿವ ಕೆ.ಜೆ ಜಾರ್ಜ್ ಮಾತಿನಲ್ಲೇ ಯತ್ನಾಳ್ ಅವರ ಕಾಲೆಳೆದರು. ಇದಕ್ಕೆ ಪ್ರತ್ಯುತ್ತರ ನೀಡಿದ ಯತ್ನಾಳ್, ನಾನು ಯಾವ ಹುದ್ದೆಗೂ ಆಸೆ ಪಡಲ್ಲ, ಆಸೆ ಪಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದೆ ಎಂದರು.
Key words: opposition leader-Minister- K.J George –Basanagowda patil Yatnal.