ತಮಗೆ ನೀಡಿದ್ದ ಝೆಡ್ ಪ್ಲಸ್ ಭದ್ರತೆ ಮುಂದುವರೆಸುವಂತೆ ಸಿಎಂಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮನವಿ…

ಬೆಂಗಳೂರು,ಮಾ,16,2020(www.justkannada.in):  ತಮಗೆ ನೀಡಲಾಗಿದ್ದ ಝೆಡ್ ಪ್ಲಸ್ ಭದ್ರತೆಯನ್ನು ಮುಂದುವರೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ  ಬರೆದು ಮನವಿ ಮಾಡಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನೀಡಲಾಗಿದ್ದ ಭದ್ರತೆಯನ್ನ ಇಂದು ಕಡಿತ ಮಾಡಲಾಗಿದೆ. ಸಿದ್ಧರಾಮಯ್ಯ ಅವರ ಭದ್ರತೆಗೆ ನಾಲ್ಕುವಾಹನಗಳಿದ್ದವು. ಈಗ ಎರಡು ವಾಹನಗಳಿಗೆ ಸೀಮಿತ ಮಾಡಲಾದೆ.  ಭದ್ರತೆ ಕಡಿತ ಮಾಡಿದ ಹಿನ್ನೆಲೆ ಸಿಎಂ ಬಿಎಸ್ ವೈಗೆ ಪತ್ರ ಬರೆದಿರುವ ಮಾಜಿ ಸಿಎಂ ಸಿದ್ಧರಾಮಯ್ಯ,  ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ತಮಗೆ ಝೆಡ್ ಪ್ಲಸ್ ಭದ್ರತೆ ನೀಡಲಾಗಿತ್ತು. ಆದರೆ, ಈಗ ಝೆಡ್ ಪ್ಲಸ್ ಭದ್ರತೆ ಹಿಂದಕ್ಕೆ ಪಡೆಯಲಾಗಿದೆ. ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವಾಗ ಸುರಕ್ಷತೆಯ ದೃಷ್ಟಿಯಲ್ಲಿ ಭದ್ರತೆಯನ್ನು ವಾಪಸ್‌ ನೀಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರಿಗೆ ನೀಡಲಾಗಿದ್ದ ಭದ್ರತೆಯನ್ನು ಸರ್ಕಾರ ಹಿಂದಕ್ಕೆ ಪಡೆದಿತ್ತು. ಇದೀಗ ವಿರೋಧ ಪಕ್ಷದ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ  ಭದ್ರತೆಯನ್ನ ಕಡಿತ ಮಾಡಲಾಗಿದೆ.

Key words: Opposition leader- Siddaramaiah- appeals – CM- continue – Z-plus- security.